Publish Date: Fri, 15 Sep 2023 (16:42 IST)
Updated Date: Fri, 15 Sep 2023 (16:49 IST)
ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಬಂಧನವಾಗಿದ್ದ ಚೈತ್ರಾ ಇಂದು ವಿಚಾರಣೆಯ ವೇಳೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಬಾಯಲ್ಲಿ ನೊರೆ ಬರುತ್ತಿದ್ದು ಸ್ಟ್ರೆಚರ್ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಯಿತು. ನಿನ್ನೆಯಿಂದ ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ 2ನೇ ದಿನವಾದ ಇಂದು ಚೈತ್ರಾ ಅನಾರೋಗ್ಯದಿಂದ ಕುಸಿದುಬಿದ್ದಿರುವುದಾಗಿ ತಿಳಿದುಬಂದಿದೆ. ಕೂಡಲೇ ಅವರನ್ನು ಸಿಸಿಬಿ ಕಚೇರಿಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಚೈತ್ರಾ ಕುಂದಾಪುರ ಆರೋಗ್ಯ ಸ್ಥಿರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಅಧಿಕಾರಿ ಅಸೀಮಾ ಬಾನು ಮಾಹಿತಿ ನೀಡಿದ್ದಾರೆ.. ಚೈತ್ರಾಗೆ ಫಿಡ್ಸ್ ಇರಲಿಲ್ಲ.. ಎಲ್ಲಾ ತರದ ಟ್ರೀಟ್ಮೆಂಟ್ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.