ನಗರದ ಪುರಾಣ ಪ್ರಸಿದ್ಧ ಚಾಮರಾಜೇಶ್ವರ ದೇವಸ್ಥಾನದ ರಥಕ್ಕೆ ಕಿಡಗೇಡಿಗಳು ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ ಇಂದು ನಗರ ಬಂದ್‌ಗೆ ಕರೆ ನೀಡಲಾಗಿದೆ.
ನಿನ್ನೆ ನಡೆದ ಅ ದೇವಾಲಯದ ಆವರಣದಲ್ಲಿ ಸಭೆ ಸೇರಿದ್ದ ಭಕ್ತ ಮಂಡಳಿ, ಇಂದು ಚಾಮರಾಜನಗರ ಬಂದ್ಗೆ ಕರೆ ನೀಡಿತ್ತು. ಇಂದು ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಗರದಲ್ಲಿ ಬಂದ್ ಘೋಷಿಸಲಾಗಿದೆ.
ರಥಕ್ಕೆಹಚ್ಚಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು. ದೇವಸ್ಥಾನಕ್ಕೆ ಸರ್ಕಾರ ನೂತನ ರಥವನ್ನು ನಿರ್ಮಿಸಿಕೊಡಬೇಕು ಎಂದು ಭಕ್ತ ಮಂಡಳಿ ಒತ್ತಾಯಿಸಿದೆ.
ಶನಿವಾರ - ಭಾನುವಾರ ನಡುವಿನ ರಾತ್ರಿ 1 ಗಂಟೆ ಸುಮಾರಿಗೆ ಚಾಮರಾಜೇಶ್ವರ ರಥಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ದೇವಸ್ಥಾನದ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ಈ ದೃಶ್ಯಾವಳಿಗಳು ಸೆರೆಯಾಗಿದ್ದು , ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ನಗರದಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.