Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಚಾಮರಾಜಪೇಟೆ ಮೈದಾನ ವಿವಾದ ವಿಚಾರವಾಗಿ ಬಂದ್ಗೆ ಕರೆ ನೀಡಿದ್ದ ಚಾಮರಾಜಪೇಟೆ ಜನರಿಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಜುಲೈ 12 ರಂದು ಬಂದ್ಗೆ ಕರೆ ನೀಡಿದ್ದ ಸಂಘಟನೆಗಳಿಗೆ ಚಾಮರಾಜಪೇಟೆ ಪೊಲೀಸ್ ಇನ್ಸ್ಪೆಕ್ಟರ್ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಱಲಿ, ಮುಷ್ಕರ ನಡೆಸದಂತೆ ಹಾಗೂ ಒತ್ತಾಯಪೂರ್ವಕವಾಗಿ ಅಂಗಡಿ-ಮುಂಗಟ್ಟು ಮುಚ್ಚಿಸದಂತೆ ಪೊಲೀಸರು ತಿಳುವಳಿಕೆ ಪತ್ರ ನೀಡಿದ್ದಾರೆ. ಇನ್ನು ಪ್ರತಿಭಟನೆ,ಱಲಿ ನಡೆಸುವುದಿದ್ದರೆ ಫ್ರೀಡಂ ಪಾರ್ಕ್ನಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ಒಂದು ವೇಳೆ ನಿಯಮ ಮೀರಿ ಬಂದ್ ಮಾಡಿದ್ರೆ ಕಠಿಣಕ್ರಮ ಕೈಗೊಳ್ಳಲಾಗುತ್ತೆ ಅಂತಾ ಕೂಡ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.