ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಚಿರತೆ ಸೆರೆ ಹಿಡಿಯಲಾಗಿದೆ. ಹಳ್ಳಿಗಳ ಹೊರಭಾಗದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಜನರ ಆತಂಕಕ್ಕೆ ಕಾರಣವಾಗಿತ್ತು.
ಚಿತ್ರದುರ್ಗ ತಾಲ್ಲೂಕಿನ ಪಾಲವ್ವನಹಳ್ಳಿ ಗ್ರಾಮದ ಹೊರವಲಯದಲ್ಲಿ ಕಾಣಿಸಿಕೊಂಡಿದ್ದ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಗ್ರಾಮದ ಜಮೀನಿನಲ್ಲಿ ಗಾಯಗೊಂಡು ಬಿದ್ದಿದ್ದ ಚಿರತೆ ಸೆರೆಯಾಗಿದೆ. ಬಲೆ ಬಳಸಿ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಮಾಡಿದ ಕೆಲಸದಿಂದ ಜನರು ನೆಮ್ಮದಿಯ ನಿಟ್ಟಿಸಿರು ಬಿಡುವಂತಾಗಿದೆ.
ಚಿರತೆ ಸೆರೆಯಾದ ಹಿನ್ನೆಲೆ ಪಾಲವ್ವನಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರ ಆತಂಕ ದೂರವಾದಂತಾಗಿದೆ. ಹಿರಿಯೂರು ಅರಣ್ಯ ಅಧಿಕಾರಿ ನಾಗೇಂದ್ರ ನಾಯ್ಕ್ ನೇತೃತ್ವದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ನಡೆಯಿತು.