ಬೆಂಗಳೂರು : ಫೆಬ್ರವರಿ 6ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಈ ಹೊತ್ತಿನಲ್ಲೇ ಮಾಜಿ ಸಚಿವ ಆರ್. ಅಶೋಕ್ ಹೊಸದೊಂದು ಬಾಂಬ್ ಸಿಡಿಸಿದ್ದಾರೆ.
‘ಕಾಂಗ್ರೆಸ್ಸಿನ 20ರಿಂದ 25 ಶಾಸಕರು ಹಾಗೂ ಜೆಡಿಎಸ್ ನ ಕೆಲವು ಶಾಸಕರು ಕೈಗೆ ಸಿಗದೇ ಓಡಾಡುತ್ತಿದ್ದಾರೆ, ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ಮಂಡಿಸೋದೇ ಅನುಮಾನ’ ಎಂದು ಆರ್. ಅಶೋಕ್ ಹೊಸ ಬಾಂಬ್ ಸ್ಪೋಟಿಸಿದ್ದಾರೆ.
‘ನಾವೇನೂ ರಾಜಕೀಯ ಸನ್ಯಾಸಿಗಳಲ್ಲ. ಮೈತ್ರಿ ಪಕ್ಷದ ಶಾಸಕರು ರಾಜೀನಾಮೆ ಕೊಟ್ಟರೆ ನಾವು ಒಂದು ಕೈ ನೋಡ್ತೀವಿ ‘ಅಂತ ಆರ್. ಅಶೋಕ್ ಹೇಳಿದ್ದಾರೆ. ಈ ಹೇಳಿಕೆಯಿಂದ ಮತ್ತೆ ಆಪರೇಷನ್ ಕಮಲಕ್ಕೆ ಬಿಜೆಪಿ ಕೈ ಹಾಕಿದೆ ಎಂಬ ಅನುಮಾನ ವ್ಯಕ್ತವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.