ಶೇಕಡಾ 20 ರಷ್ಟು ಮತಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಮೇಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವುದು ರಾಜ್ಯಕ್ಕೆ ಒಳ್ಳೆಯದಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕ್ರಮ ರಾಜ್ಯದ ಹಿತಾಸಕ್ತಿಗೆ ಮಾರಕವಾಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿನಾಶಕಾಲೆ ವಿಪರೀತಿ ಬುದ್ದಿ ಎಂಬಂತೆ ಅಲ್ಪ ಸಂಖ್ಯಾತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಐಜಿಪಿ ಅವರಿಗೆ ಪತ್ರ ಬರೆದಿರುವುದು ಖಂಡನೀಯವಾಗಿದೆ. ಬಹು ಸಂಖ್ಯಾತರನ್ನು ಒಡೆದಾಳುವ ನೀತಿ ಅನುಸರಿಸುತ್ತಿದ್ದು, ಜಾತಿ ಜಾತಿಗಳ ನಡುವೆ ಸಂಘರ್ಷ ಉಂಟು ಮಾಡುತ್ತಿದ್ದಾರೆ ಎಂದಿದ್ದಾರೆ.
ಅಮಿತ್ ಶಾ ಲೆಕ್ಕ ಕೇಳಿದ ಬಗ್ಗೆ ಪ್ರತಿಕ್ರಿಸಿದ ಅವರು, ಲೆಕ್ಕ ಕೇಳುವುದು ನಮ್ಮ ಹಕ್ಕು, ಅನುದಾನ ಬಳಕೆಯಾಗಿರುವ ಬಗ್ಗೆ ಶ್ವೇತ್ರಪತ್ರ ಹೊರಡಿಸಬೇಕು. ರಾಜ್ಯದ ಮಾನ ಮರ್ಯಾದೆ ಹರಾಜು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.