Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತ ರಾಮಮೂರ್ತಿ ಸಲ್ಲಿಸಿದ ದೂರಿನನ್ವಯ ತನಿಖೆ ಆರಂಭಿಸಲಾಗಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ಆರ್‌ಟಿಐ ಕಾರ್ಯಕರ್ತನ ದೂರು ಆಧರಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ನೂರಾರು ಕೋಟಿ ರೂಪಾಯಿ ಬೇನಾಮಿ ಆಸ್ತಿ ಮಾಡಿದ್ದಾರೆ. ಕುಟುಂಬಸ್ಥರು ಮತ್ತು ಸ್ನೇಹಿತರ ಹೆಸರಲ್ಲಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ರಾಮಮೂರ್ತಿ ಆದಾಯ ತೆರಿಗೆ ಇಲಾಖೆಗೆ 1638 ಪುಟಗಳ ದಾಖಲೆ ನೀಡಿದ್ದಾರೆ.
ಆದಾಯ ತೆರಿಗೆ ಇಲಾಖೆಯ ನಿರ್ದೇಶಕರು ರಾಮಮೂರ್ತಿಗೆ ನೋಟಿಸ್ ಜಾರಿಗೊಳಿಸಿದ್ದು, ಹೆಚ್ಚಿನ ವಿವರವಿರುವ ದಾಖಲೆಗಳಿದ್ದಲ್ಲಿ ಕಚೇರಿಗೆ ನೀಡುವಂತೆ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.