Publish Date: Tue, 01 Aug 2023 (11:34 IST)
Updated Date: Tue, 01 Aug 2023 (11:35 IST)
ಉಡುಪಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಮಂಗಳವಾರ) ಉಡುಪಿ ಪ್ರವಾಸ ಕೈಗೊಂಡಿದ್ದು, ಇವರ ಈ ಪ್ರವಾಸ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಸಿದ್ದರಾಮಯ್ಯ ಅವರು ಪ್ರಗತಿ ಪರಿಶೀಲನಾ ಸಭೆಗೆ ಉಡುಪಿಗೆ ಆಗಮಿಸುತ್ತಿದ್ದು, ಉಡುಪಿಯ ಮಣಿಪಾಲದಲ್ಲಿರುವ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಲಿದೆ. ಕೆಡಿಪಿ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾಗಿಯಾಗಲಿದ್ದಾರೆ.
ಸದ್ಯ ರಾಜ್ಯದಲ್ಲಿ ಚರ್ಚೆಯಲ್ಲಿರುವ ಖಾಸಗಿ ಕಾಲೇಜಿನ ವಿಡಿಯೋ ಪ್ರಕರಣದ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ಸಭೆಯಲ್ಲಿ ಉಡುಪಿಯ ಐದು ಬಿಜೆಪಿ ಶಾಸಕರು ಭಾಗಿಯಾಗಲಿದ್ದಾರೆ.