Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನಗರದ ಚಾಮರಾಜಪೇಟ್ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಯಾದ (Delivery) ಎರಡು ಗಂಟೆಯಲ್ಲಿ ಮಗು (Baby) ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ನಿವಾಸಿ ಉಮಾಸಲ್ಮಾ- ಇಸ್ಮಾಯಿಲ್ ಜಬೀವುಲ್ಲಾ ದಂಪತಿಗೆ ಇದೇ ತಿಂಗಳ 16 ರಂದು ಮಗು ಜನಿಸಿತ್ತು. ಮಗು ಜನಿಸಿ ಎರಡೇ ಗಂಟೆಯಲ್ಲಿ ನಾಪತ್ತೆಯಾಗಿದೆ. ಉಮಾಸಲ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆ ಬಳಿಕ ಸಂಬಂಧಿಕರ ಕೈಗೆ ಮಗು ಕೊಡುವುದಾಗಿ ಸಿಬ್ಬಂದಿ ಹೇಳಿದ್ದರು. ಆದರೆ ಮಗು ಕೊಟ್ಟಿಲ್ಲ ಅಂತ ಪಾಲಕರು ಆಕ್ರೋಶ ಹೊರಹಾಕಿದ್ದಾರೆ.