ನವದೆಹಲಿ : ಸರ್ಕಾರದ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ.
ಪಾದಯಾತ್ರೆ ವೇಳೆ ಶಾಲಾ ಮಕ್ಕಳನ್ನು ಶಿವಕುಮಾರ್ ಭೇಟಿಯಾದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದೆ.
ಪತ್ರದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವ ಶಿವಕುಮಾರ್ ವಿರುದ್ಧ ಕ್ರಮ ಕೈಗೊಂಡು 7 ದಿನಗಳ ಒಳಗಡೆ ವರದಿ ನೀಡುವಂತೆ ಸೂಚಿಸಿದೆ.
ಪತ್ರದಲ್ಲಿ ಡಿ.ಕೆ.ಶಿವಕುಮಾರ್ ಅವರು ಶಾಲಾ ಮಕ್ಕಳೊಂದಿಗೆ ಇರುವ ವಿಡಿಯೋದ ಟ್ವಿಟ್ಟರ್ ಲಿಂಕ್ ಅನ್ನು ಉಲ್ಲೇಖಿಸಿದೆ. ಮಕ್ಕಳನ್ನು ರಾಜಕೀಯಕ್ಕೆ ಬಳಸಿಕೊಂಡಿರುವ ಬಗ್ಗೆ ತನಿಖೆ ನಡೆಸುವಂತೆ ಆಯೋಗ ಸೂಚಿಸಿದೆ.