Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೇಸಿಗೆ ರಜೆ ಅಂತ್ಯವಾಗಿದ್ದು ಇಂದಿನಿಂದ 2022 -23ನೇ ಸಾಲಿನ ಶೈಕ್ಷಣಿಕ ವರ್ಷದ 1 ರಿಂದ 10ನೇ ತರಗತಿಗಳಿಗೆ ಶಾಲೆ ಆರಂಭವಾಗಿದೆ. ರಾಜ್ಯಾದ್ಯಂತ ವಿದ್ಯಾರ್ಥಿಗಳನ್ನು ಶಿಕ್ಷಕರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.. ಹಬ್ಬದ ರೀತಿಯಲ್ಲಿ ರಂಗೋಲಿ, ತಳಿರು ತೋರಣದಿಂದ ಶಾಲೆಗಳು ಸಿಂಗಾರಗೊಂಡಿದ್ದವು. ಇಂದಿನಿಂದ ಮುಂದಿನ 15 ದಿನಗಳು ಕಲಿಕಾ ಚೇತರಿಕೆ ಕಾರ್ಯಕ್ರಮ ನಡೆಯಲಿದ್ದು, ತುಮಕೂರಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನ ಉದ್ಘಾಟಿಸಿ ಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ.