ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ದೇಶಗಳ ನಾಯಕರು ಭಾಗಿಯಾಗಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಕೂಡ ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಆಫ್ರಿಕಾದ ಉಪಾಧ್ಯಕ್ಷರನ್ನು ಭೇಟಿ ಮಾಡಲು ಅತಿಥಿ ಗೃಹಕ್ಕೆ ಬಂದಿದ್ದು, ಈ ಸಂದರ್ಭದಲ್ಲಿ ಚೀನಾ ಅಧ್ಯಕ್ಷರ ಜತೆಗೆ ಬಂದಿದ್ದ ಸಹಾಯಕರೊಬ್ಬರನ್ನು ಹಾಲ್ ಪ್ರವೇಶಿಸದಂತೆ ಭದ್ರತಾ ಅಧಿಕಾರಿಗಳು ತಡೆದಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವೀಡಿಯೊದಲ್ಲಿ ಕ್ಸಿ ಜಿನ್‌ಪಿಂಗ್ ಸಭಾಂಗಣದ ಕಡೆಗೆ ಹೋಗುತ್ತಿರುವುದನ್ನು ಕಾಣಬಹುದು. ಚೀನಾದ ಪ್ರಧಾನಿ ಸಭಾಂಗಣಕ್ಕೆ ಪ್ರವೇಶಿಸುತ್ತಿದ್ದಂತೆ, ಅವರ ಸಹಾಯಕರೊಬ್ಬರು ಕೂಡ ಅವರ ಹಿಂದೆ ಓಡಿಕೊಂಡು ಬರುತ್ತಾರೆ. ಆದರೆ ಆಫ್ರಿಕಾ ಭದ್ರತಾ ಪಡೆ ಸಿಬ್ಬಂದಿ ಅವರನ್ನು ತಡೆದಿದ್ದಾರೆ. ಈ ಸಮಯದಲ್ಲಿ ಅಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಒಂದು ಬಾರಿ ಗೊಂದಲಕ್ಕೆ ಒಳಗಾಗುತ್ತಾರೆ.