Webdunia - Bharat's app for daily news and videos

Install App

ಮನೆಯಲ್ಲೇ ಇದ್ದ ವ್ಯಕ್ತಿಯಲ್ಲಿ ಸಿಕ್ತು ಕೊರೊನಾ ಸೋಂಕು

Webdunia
ಮಂಗಳವಾರ, 14 ಏಪ್ರಿಲ್ 2020 (17:19 IST)
ಮಾರಕ ರೋಗವಾಗುತ್ತಿರುವ ಕೊರೊನಾ ವೈರಸ್ ಟ್ರಾವೆಲ್ ಹಿಸ್ಟರಿ ಇಲ್ಲದ ವ್ಯಕ್ತಿಯಲ್ಲಿ ಪತ್ತೆಯಾಗಿ ಮತ್ತೊಂದು ಶಾಕ್ ನೀಡಿದೆ.

ಇದುವರೆಗೂ ಟ್ರಾವೆಲ್ ಹಿಸ್ಟರಿ ದೆಹಲಿ, ಮೆಕ್ಕಾ, ಸೌದಿ ಅರೇಬಿಯಾ ಮತ್ತಿತರ ಹೊರ ದೇಶಗಳಿಂದ ಬಂದವರಲ್ಲಿ ಮಾತ್ರ ಕೊರೊನಾ  ಸೋಂಕು ಪತ್ತೆಯಾಗಿರುವುದು ಒಂದೆಡೆಯಾದರೆ, ಪ್ರಯಾಣ ಹಿನ್ನೆಲೆ ಇಲ್ಲದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತೀವ್ರ ಆತಂಕವನ್ನು ಉಂಟುಮಾಡಿದೆ.

ಹಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕಬಳ್ಳಾಪುರ  ನಗರದ 17ನೇ ವಾರ್ಡ್ ನ  65 ವರ್ಷದ  ವ್ಯಕ್ತಿಯಲ್ಲಿ ಕೊರೊನಾ‌ ಸೋಂಕು ಇರುವುದು ‌ದೃಢಪಟ್ಟಿದೆ.

ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿ ಸಾಕಷ್ಟು ಮಂದಿ ಇದ್ದು ಆರೋಗ್ಯ ಇಲಾಖೆ ಅವರ ಪತ್ತೆ ಕಾರ್ಯಕ್ಕೆ ಮುಂದಾಗಿದೆ.
ಚಿಕ್ಕಬಳ್ಳಾಪುರಕ್ಕೂ ವಿಸ್ತರಿಸಿದ ಕೊರೊನಾ ಸೋಂಕು : ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ಮಾತ್ರ 12 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದರು. ಇದೀಗ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರಕ್ಕೂ ಕೊರೊನಾ ಸೋಂಕು ವಿಸ್ತರಣೆ ಆಗಿರುವುದು ಜನರಲ್ಲಿ ಆತಂಕ ತಂದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments