ಬೆಂಗಳೂರು : ಸಿಐಡಿ ಡಿವೈಎಸ್ ಪಿ ಲಕ್ಷ್ಮಿ ಆತ್ಮಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣದ ಸೂಕ್ತ ತನಿಖೆ ನಡೆಸುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸತ್ಯಾಸತ್ಯತೆ ಅರಿಯಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹಾವೇರಿಯಲ್ಲಿ ಗೃಹ ಸಚಿವ ಬೊಮ್ಮಾಯಿ ತಿಳಿಸಿದ್ದಾರೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಸಿಐಡಿ ಡಿವೈಎಸ್ ಪಿ ಲಕ್ಷ್ಮಿ ನಿನ್ನೇ ರಾತ್ರಿ ಗೆಳೆಯನ ಮನೆಯಲ್ಲಿ ಪಾರ್ಟಿ ಮುಗಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆ ಬಗ್ಗೆ ಅನುಮಾನ ವ್ಯಕ್ತವಾಗಿದೆ ಎನ್ನಲಾಗಿದೆ.