Publish Date: Fri, 18 Nov 2022 (18:32 IST)
Updated Date: Fri, 18 Nov 2022 (18:49 IST)
ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರಿದಿದೆ. ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಮಂಜು ಮುಸುಕುವ ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಷಿಯಸ್ ಉಷ್ಣಾಂಶ ದಾಖ ಲಾಗಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.