ಬೆಂಗಳೂರು : ನಾಳೆ ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ಇಂದು ದೆಹಲಿಯಲ್ಲಿ ರೈತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ದೆಹಲಿಯಲ್ಲಿ ರೈತರ ಪ್ರತಿಭಟನೆಗೆ ಸಿಎಂ ಅರವಿಂದ್ ಕ್ರೇಜಿವಾಲ್ ಬೆಂಬಲ ನೀಡಿದ್ದಾರೆ. ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಕ್ರೇಜಿವಾಲ್ ಬೆಂಬಲ ಸೂಚಿಸಿದ್ದಾರೆ. ದೆಹಲಿಯ ಸಿಂಘು ಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನಾ ನಿರತ ರೈತರ ಬೇಡಿಕೆಗಳು ನ್ಯಾಯಯುತವಾಗಿದೆ ಎಂದು ಹೇಳಿದ್ದಾರೆ.