Publish Date: Fri, 31 Mar 2023 (21:00 IST)
Updated Date: Fri, 31 Mar 2023 (18:55 IST)
ಬೆಂಗಳೂರಿನ ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಹೋಗುವ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕಾರು ತಪಾಸಣೆ ನಡೆಸಲಾಗಿದೆ. ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದ ಹೊಸಹುಡ್ಯ ಚೆಕ್ ಪೋಸ್ಟ್ ಬಳಿ ಸಿಎಂ ಬೊಮ್ಮಾಯಿ ಕಾರು ನಿಲ್ಲಿಸಿ ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ SST ತಂಡ ಸಿಎಂ ಕಾರನ್ನು ಪರಿಶೀಲನೆ ನಡೆಸಿದರು.
geetha
Publish Date: Fri, 31 Mar 2023 (21:00 IST)
Updated Date: Fri, 31 Mar 2023 (18:55 IST)