Publish Date: Mon, 14 Nov 2022 (12:40 IST)
Updated Date: Mon, 14 Nov 2022 (12:41 IST)
ಬೆಂಗಳೂರು : ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಹೊಡೆಯುವ ಸರ್ಕಾರದ ನಿರ್ಧಾರವನ್ನು ಸಿಎಂ ಬಸವರಾಜ ಬೊಮ್ಮಾಯಿ ಸಮರ್ಥನೆ ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ಗೆ ಕೇಸರಿ ಬಣ್ಣ ಕಂಡರೆ ಯಾಕೆ ಅಲರ್ಜಿ ಎಂದು ಕಿಡಿಕಾರಿದ್ದಾರೆ. ವಿವೇಕ ಯೋಜನೆಯಡಿ ನಿರ್ಮಾಣವಾಗುತ್ತಿರುವ ಶಾಲೆಗಳ ಕೊಠಡಿಗಳಿಗೆ ಕೇಸರಿ ಬಣ್ಣ ಹೊಡೆಯಲು ಸರ್ಕಾರ ಮುಂದಾಗಿದೆ.
ಇದಕ್ಕೆ ಕಾಂಗ್ರೆಸ್ ಮತ್ತು ಮುಸ್ಲಿಂ ಸಂಘಟನೆಗಳು ವಿರೋಧ ಮಾಡಿವೆ. ವಿರೋಧ ಮಾಡಿದ ಕಾಂಗ್ರೆಸ್ ಮತ್ತು ಮುಸ್ಲಿಂ ಸಂಘಟನೆ ವಿರುದ್ಧ ಮುಖ್ಯಮಂತ್ರಿಗಳು ಕಿಡಿಕಾರಿದರು.