ಡಿಕೆಶಿಗೆ ಸಿಎಂ ಬೊಮ್ಮಾಯಿ ಗುದ್ದು

Webdunia
ಶನಿವಾರ, 22 ಏಪ್ರಿಲ್ 2023 (20:16 IST)
ಕಾಂಗ್ರೆಸ್ ಗುಂಡಿಯಲ್ಲೇ ಮೊದಲು ನೀರೇ ಇಲ್ಲ. ಮೊದಲು ಅದನ್ನು ನೋಡಿಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.ಬಿಜೆಪಿ ಡ್ಯಾಂ ಒಡೆದು ನೀರು ಖಾಲಿಯಾಗಿ ಕಾಂಗ್ರೆಸ್‍ನತ್ತ ಹರಿದುಬರುತ್ತದೆ ಎಂಬ ಶಿವಕುಮಾರ್ ಹೇಳಿಕೆಗೆ ಕೆಂಡಮಂಡಲರಾದ ಸಿಎಂ, ಕಾಂಗ್ರೆಸ್ ಗುಂಡಿಯಲ್ಲಿ ನೀರೇ ಇಲ್ಲದಿರುವಾಗ ಹರಿದು ಹೋಗುವುದು ಎಲ್ಲಿಗೆ ಎಂದು ಪ್ರಶ್ನೆ ಮಾಡಿದರು.....ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಕಾಂಗ್ರೆಸ್‍ನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ನೋಡಿಕೊಳ್ಳಲಿ. ಬಿಜೆಪಿ ಬಗ್ಗೆ ಅವರು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಮ್ಮ ಹೈಕಮಾಂಡ್ ಬಲಿಷ್ಟವಾಗಿದ್ದು ಏನೇ ಇದ್ದರೂ ಸರಿಪಡಿಸುವ ಸಾಮಥ್ರ್ಯ ಹೊಂದಿದ್ದಾರೆ ಎಂದರು. ಯಡಿಯೂರಪ್ಪ ಅವರನ್ನು ಬಿಜೆಪಿ ಸೇರಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮುಗಿಸಲು ಹೊರಟ್ಟಿದ್ದಾರೆ ಎಂಬ ಡಿಕೆಶಿ ಆರೋಪಕ್ಕೆ ಸಿಡಿಮಿಡಿಗೊಂಡ ಬೊಮ್ಮಾಯಿ, ಸಿದ್ದರಾಮಯ್ಯ ಅವರನ್ನು ಹೇಗೆ ಮುಗಿಸಿದ್ದಾರೆ ಎಂಬುದು ಗೊತ್ತಿಲ್ಲವೇ..ಕಳೆದ ಬಾರಿ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯನವರನ್ನು ಮುಗಿಸಿದ್ದೇ ಕಾಂಗ್ರೆಸ್ ಪಕ್ಷ. ಈ ಬಾರಿ ವರುಣಾದಲ್ಲಿ ಮುಗಿಸಲು ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರು ಏನೇನು ತಂತ್ರ, ಕುತಂತ್ರ ಮಾಡಿದ್ದಾರೆ ಎಂಬುದು ಜಗತ್ತಿಗೆ ಗೊತ್ತು ಎಂದು ಡಿಕೆಶಿ ವಿರುದ್ಧ ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಧಾರ್ಮಿಕ ತಾಣದಲ್ಲಿ ಯುವಕ, ಯುವತಿ ಅಸಭ್ಯ ವರ್ತನೆ: ಕ್ಯಾಮರಾ ನೋಡುತ್ತಿದ್ದಂತೇ ಎಸ್ಕೇಪ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ಬ್ಯಾನ್ ಮಾಡಲು ಪ್ರಿಯಾಂಕ್ ಖರ್ಗೆಗೆ ಸಾಧ್ಯವೇ, ಕಾನೂನಿನ ಬಗ್ಗೆ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ವಿವರಣೆ

Shocking video: ನವಜಾತ ಮಗುವೇನು ಆಟದ ವಸ್ತುವಾ...: ಈ ಪಾಪಿಗೆ ಯಾವ ಶಿಕ್ಷೆ ಕೊಡಬೇಕು ನೀವೇ ಹೇಳಿ

ಮುಂದಿನ ಸುದ್ದಿ
Show comments