Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಶೀಘ್ರದಲ್ಲೇ ಸರ್ಕಾರಿ ಆದೇಶಗಳನ್ನು ಕನ್ನಡದಲ್ಲಿ ನೀಡಲಾಗುವುದು

ಶೀಘ್ರದಲ್ಲೇ ಸರ್ಕಾರಿ ಆದೇಶಗಳನ್ನು ಕನ್ನಡದಲ್ಲಿ ನೀಡಲಾಗುವುದು
ಬೆಂಗಳೂರು , ಸೋಮವಾರ, 1 ನವೆಂಬರ್ 2021 (16:58 IST)
ಕನ್ನಡದ ಪ್ರಗತಿಯಾದರೆ ಕರ್ನಾಟಕದ ಪ್ರಗತಿಯಾಗುತ್ತದೆ. ಆಡಳಿತದಲ್ಲಿ ಕನ್ನಡ ಅನುಷ್ಠಾನ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಪೊಲೀಸ್‌ ಕವಾಯತಿನ ನಿರ್ದೇಶನ ಸೇರಿದಂತೆ ಎಲ್ಲ ಆದೇಶಗಳನ್ನು ಕನ್ನಡದಲ್ಲಿಯೇ ನೀಡುವ ಪದ್ಧತಿಯನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಅವರು ಇಂದು ಬೆಂಗಳೂರಿನಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.
 
ಈಗ ಕವಾಯತು ಕಮಾಂಡಗಳು ಆಂಗ್ಲ ಭಾಷೆಯಲ್ಲಿವೆ. ಮುಂದಿನ ದಿನಗಳಲ್ಲಿ ಕವಾಯತು ಕಮಾಂಡಗಳನ್ನು ಕನ್ನಡದಲ್ಲಿ ನೀಡುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದರು.
 
ಸರ್ಕಾರಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳಲ್ಲಿ ಕೊಠಡಿ, ಮೂಲಭೂತ ಸೌಕರ್ಯಕ್ಕೆ ಮುಂದಿನ ಆಯವ್ಯಯದಲ್ಲಿ ಅತಿ ಹೆಚ್ಚಿನ ಅನುದಾನವನ್ನು ಮೀಸಲಿರಿಸಲಾಗುವುದು ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಪುನೀತ್ ಪ್ರತಿಮೆ