ಬೆಂಗಳೂರು : ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಇಂದು ನಿಧನರಾದ ಹಿನ್ನಲೆಯಲ್ಲಿ ಅವರ ನಿಧನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿಎಸ್ ವೈ, ಕನ್ನಡಕ್ಕೆ ಮಿಡಿಯುತ್ತಿದ್ದ ಲೇಖಕ , ಸಂಶೋಧಕ , ಚಿಂತಕ , ಇತಿಹಾಸಕಾರರಾಗಿದ್ದ ಚಿಮೂ ನಿಧನದ ಸುದ್ದಿ ನೋವಿನದ್ದು, ಅವರ ಸ್ಥಾನ ಅನನ್ಯ, ಅದನ್ನ ಯಾರು ತುಂಬಲಾಗದು. ಬಳ್ಳಾರಿ ಜಿಲ್ಲೆಯ ಹಂಪಿಯ ಸ್ಮಾರಕಗಳನ್ನು ಉಳಿಸುವಲ್ಲಿ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನಕ್ಕೆ ಅವರ ಪ್ರಯತ್ನ ಸ್ಮರಣೀಯ. ದೇವರು ಅವರ ಆತ್ಮಕ್ಕೆ ಶಾಂತಿಯನ್ನ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.