Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಬಹುಮತವಿದ್ದರೂ ಕಾಂಗ್ರೆಸ್, ಜೆಡಿಎಸ್ ಸೇರಿ ಸರ್ಕಾರ ರಚನೆ ಮಾಡಿದ್ದಾರೆ. ಬಿಜೆಪಿಗೆ ಅಧಿಕಾರ ಸಿಗಬಾರದೆಂದು ಮೈತ್ರಿ ಸರ್ಕಾರ ರಚಿಸಿದ್ರು ಎಂದು ವಿಪಕ್ಷಗಳ ಮೇಲೆ ಸಿಎಂ ಬಿಎಸ್ ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಆಡಳಿತದ ಬಗ್ಗೆ ನಾನು ಹೇಳಬೇಕಿಲ್ಲ. ಕ್ಲರ್ಕ್ ರೀತಿಯಲ್ಲಿ ಕೆಲಸ ಮಾಡಿದ್ದೇ, ಕಿರುಕುಳ ಅನುಭವಿಸಿದ್ದೆ. ಹೀಗೆಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಹೆಚ್.ಡಿಕೆ ಅಧಿಕಾರ ನಡೆಸಲು ಬಿಡದೆ ತೊಂದ್ರೆ ಕೊಟ್ರು. ಇದನ್ನು ನಾವೆಲ್ಲರೂ ನೋಡಿದ್ದೇವೆ. ಸಿದ್ಧರಾಮಯ್ಯರಿಂದ ಅಭಿವೃದ್ಧಿ ಬಗ್ಗೆ ಮಾತ್ರ ಟೀಕೆ ನಿರೀಕ್ಷಿಸಿದ್ದೆ. ಆದ್ರೆ ಅವರು ಸರ್ಕಾರದ ಬಗ್ಗೆ ಮಾತನಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಸರ್ಕಾರ ರಚನೆ ವೇಳೆ ಮಂತ್ರಿಮಂಡಲ ಮಾಡಲು ಆಗಿರಲಿಲ್ಲ. ಆಗ ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಆದ್ರೂ ನಾನೊಬ್ಬನೇ ಓಡಾಡಿ ಪರಿಹಾರ ಕೆಲಸ ಮಾಡಿದ್ದೇನೆ. ಕೊರೊನಾದಿಂದಾಗಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗಿತ್ತು. ಇದರಿಂದ ಹಲವು ಕ್ಷೇತ್ರಗಳು ಸಂಕಷ್ಟಕ್ಕೆ ಒಳಗಾಗಿತ್ತು. ಆಗ ನಾವು ಸೂಕ್ತ ಪರಿಹಾರ ಕಾರ್ಯಗಳನ್ನು ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.