ಬೆಂಗಳೂರು : ದಿ ಕ್ಲೀನ್ ಏರ್ ಸ್ಟ್ರೀಟ್ ಪರಿಕಲ್ಪನೆಗೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.
ಪ್ರತಿವರ್ಷ ವಾಹನಗಳ ಸಂಖ್ಯೆ ಶೇ.10ರಷ್ಟು ಏರಿಕೆಯಾಗ್ತಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ವಾಯುಮಾಲಿನ್ಯ ನಿಯಂತ್ರಣಕ್ಕೆ ಹೊಸ ಪ್ಲ್ಯಾನ್ ಮಾಡಲಾಗಿದೆ.
ಆದಕಾರಣ ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ ನಲ್ಲಿ ಪ್ರತಿ ಶನಿವಾರ, ಭಾನುವಾರ ವಾಹನಗಳ ಸಂಚಾರ ನಿರ್ಬಂಧ ಹೇರಲಾಗಿದೆ. ಮುಂದಿನ ಫೆಬ್ರವರಿ 25, 2021ರವರೆಗೆ ವಾಹನ ಸಂಚಾರ ನಿರ್ಬಂಧ ಹೇರಲಾಗಿದೆ.