ಬೆಂಗಳೂರು : ಲಂಡನ್ ನಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರೊಂದಿಗೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಮಾತುಕತೆ ನಡೆಸಲಿದ್ದಾರೆ.
ಕೊರೊನಾ ದಿಂದ ಇಡೀ ವಿಶ್ವವೇ ಲಾಕ್ ಡೌನ್ ಆದ ಕಾರಣ ಲಂಡನ್ ನಲ್ಲಿ ನೆಲೆಸಿರುವ ಕನ್ನಡಿಗರ ಜೊತೆ ಇಂದು ಸಿಎಂ ಮಾತುಕತೆ ನಡೆಸಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಸಿಎಂ ವಿಡಿಯೋ ಕಾನ್ಫರೆನ್ಸ್ ಮೂಲಕ ಅನಿವಾಸಿ ಕನ್ನಡಿಗರ ಜೊತೆ ಚರ್ಚೆ ನಡೆಸಲಿದ್ದಾರೆ. ಕನ್ನಡಿಗರ ಕುಶಲೋಪರಿ ವಿಚಾರಿಸಲಿದ್ದಾರೆ ಎನ್ನಲಾಗಿದೆ.