ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ಬಲೆಯಲ್ಲಿ ಈ ಬಗ್ಗೆ ಚರ್ಚಿಸಲು ಇಂದು ರಾಜಭವನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಲಿದ್ದಾರೆ.
ಇಂದು 11.30ಕ್ಕೆ ರಾಜಭವನಕ್ಕೆ ತೆರಳಿ ರಾಜ್ಯಪಾಲರ ಭೇಟಿಯಾಗುವ ಸಿಎಂ, ಕೋವಿಡ್ ನಿಯಂತ್ರಣ ಕ್ರಮದ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಹಾಗೇ ರಾಜ್ಯಪಾಲರಿಗೆ ಈ ಬಗ್ಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ. ಅಲ್ಲದೇ ಭೂಕಂದಾಯ ತಿದ್ದಪಡಿ ವಿಧೇಯಕ, ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ಬಗ್ಗೆಯೂ ರಾಜ್ಯಪಾಲರ ಜೊತೆ ಸಿಎಂ ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ.