Webdunia - Bharat's app for daily news and videos

Install App

ತಿಂಗಳ ಬಳಿಕ ದೆಹಲಿಗೆ ಸಿಎಂ ದೌಡು!?

Webdunia
ಬುಧವಾರ, 10 ನವೆಂಬರ್ 2021 (07:34 IST)
ಬೆಂಗಳೂರು : ಬೈಎಲೆಕ್ಷನ್ ರಿಸಲ್ಟ್ ಹೊರಬಿದ್ದಿದ್ದೇ ಬಿದ್ದಿದ್ದು, ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವೇ ಸಂಭವಿಸ್ತಿದೆ.
ಅದ್ರಲ್ಲೂ ಬಿಜೆಪಿ ನಾಯಕರು ಬೈಎಲೆಕ್ಷನ್ ಫಲಿತಾಂಶದಿಂದ ಚಿಂತೆಗೀಡಾಗಿದ್ದಾರೆ. ಇಷ್ಟೆಲ್ಲದರ ಮಧ್ಯೆ ಜನರ ವಿಶ್ವಾಸ ಗೆಲ್ಲಲು ಬೃಹತ್ ಯಾತ್ರೆಗೂ ಪ್ಲ್ಯಾನ್ ಆಗಿದೆ. ಆದ್ರೆ ಈ ನಡುವೆ ಸಿಎಂ ಬೊಮ್ಮಾಯಿ ದಿಢೀರ್ ದೆಹಲಿಗೆ ತೆರಳ್ತಿದ್ದಾರೆ.
ಸಿಎಂ ತವರು ಜಿಲ್ಲೆಯಲ್ಲೇ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಸೋತಿದೆ. ಇದು ಸಿಎಂ ಸೇರಿದಂತೆ ರಾಜ್ಯ ನಾಯಕರ ಮೇಲೆ ಹೈಕಮಾಂಡ್ ಒತ್ತಡ ಹೆಚ್ಚಾಗುವಂತೆ ಮಾಡಿದೆ. ಈ ನಡುವೆ ದಿಢೀರ್ ಸಿಎಂ ದೆಹಲಿಗೆ ಪ್ರಯಾಣ ಬೆಳೆಸಿರೋದು ಭಾರಿ ಕುತೂಹಲ ಕೆರಳಿಸಿದೆ. ಇವತ್ತು ಬೆಳಗ್ಗೆ 9.45ಕ್ಕೆ ಕೆಐಎಬಿಯಿಂದ ತೆರಳಲಿರುವ ಸಿಎಂ, ಕೇಂದ್ರ ಸಚಿವರನ್ನ ಭೇಟಿಯಾಗಲಿದ್ದಾರೆ. ಹಾಗೆ ಸಂಜೆ ದೆಹಲಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಆದ್ರೆ ಬರೋಬ್ಬರಿ 1 ತಿಂಗಳ ಬಳಿಕ ದೆಹಲಿಗೆ ಸಿಎಂ ದೌಡಾಯಿಸಿದ್ದು ಯಾಕೆ ಅನ್ನೋದೆ ಪ್ರಶ್ನೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments