Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಆಸ್ಪತ್ರೆ ಅನುದಾನಕ್ಕೆ ಇಪ್ಪತ್ತು(20) ಕೋಟಿ ಕೊಟ್ಟ ಸಿಎಂ ಬಸವರಾಜ್ ಬೊಮ್ಮಾಯಿ ...!!!ಡಿಎಂಎಫ್ ಅನುದಾನದಲ್ಲಿ ಕಂಪ್ಲಿ ಮತ್ತು ಕುರುಗೋಡು ಪಟ್ಟಣದಲ್ಲಿ ನೂರು (100) ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ತಲಾ ಇಪ್ಪತ್ತು(20) ಕೋಟಿ ಅನುದಾನವನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ನೀಡಿದ್ದಾರೆ...ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ಜನಪ್ರಿಯ ನಾಯಕರಾದ ಶ್ರೀ ಟಿ ಎಚ್ ಸುರೇಶ್ ಬಾಬುರವರು ಅನುದಾನ ಮಂಜೂರಾತಿಗೆ ಸಹಕರಿಸಿದ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಾರಿಗೆ ಸಚಿವರಾದ ಶ್ರೀ ಬಿ ಶ್ರೀರಾಮುಲು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಸುಧಾಕರ ರವರಿಗೆ ಕಂಪ್ಲಿ ವಿಧಾನಸಭಾ ಕ್ಷೇತ್ರದ ಜನತೆಯ ಪರವಾಗಿ ಧನ್ಯವಾದವನ್ನು ತಿಳಿಸಿದರು ಈ ಸಂದರ್ಭದಲ್ಲಿ ಪುರಸಭೆಯ ಸದಸ್ಯರು ಹಾಗೂ ಮಂಡಲ ಅಧ್ಯಕ್ಷರು ಮತ್ತು ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು