Webdunia - Bharat's app for daily news and videos

Install App

ಸಿಎಂ ಇಬ್ರಾಹಿಂಗೆ ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ!

Webdunia
ಭಾನುವಾರ, 17 ಏಪ್ರಿಲ್ 2022 (14:09 IST)
ಕಾಂಗ್ರೆಸ್‌ಗೆ ವಿದಾಯ ಹೇಳಿದ್ದ ಸಿಎಂ ಇಬ್ರಾಹಿಂ ಭಾನುವಾರ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಬೆಂಗಳೂರಿನ ಜೆಡಿಎಸ್‌ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಇಬ್ರಾಹಿಂಗೆ ಅಧಿಕಾರ ಹಸ್ತಾಂತರ ಮಾಡಿದರು.
ಮಾಜಿ ಪ್ರಧಾನಿ, ಪಕ್ಷ ವರಿಷ್ಠ ಹೆಚ್.ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಪಕ್ಷದ ಧ್ವಜ, ಪಕ್ಷದ ಶಾಲು ಹಾಕಿ ಅಧಿಕಾರ ನೀಡಿದರು.
ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ೧೧ ಗಂಟೆ ಸಮಯ ನೋಡಿಕೊಂಡು ಪಕ್ಷದ ಬಾವುಟ ಹಸ್ತಾಂತರಿಸಿದರು. ನಂತರ ಮಾತನಾಡಿದ ಅವರು, 11 ಗಂಟೆ ಒಳ್ಳೆಯ ಸಮಯ ಅಂತ ೀ ಸಮಯದಲ್ಲಿ ಅವರಿಗೆ ಅಧಿಕಾರ ವಹಿಸಲಾಗಿದೆ ಎಂದು ಹೇಳಿದರು.
ಜೆಡಿಎಸ್ ಸಂಸದೀಯ ಮಂಡಳಿಯ ಅಧ್ಯಕ್ಷರಾಗಿ ಎಚ್.ಕೆ. ಕುಮಾರಸ್ವಾಮಿ ಅಧಿಕಾರ ಸ್ವೀಕಾರ ಮಾಡಿದರು. ರಾಜ್ಯಾಧ್ಯಕ್ಷ ಸ್ಥಾನ ವಾಪಸ್ ಪಡೆದು ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಯಿತು.
ಬಳಿಕ ಮಾತನಾಡಿದ ಹೆಚ್‍ಡಿಕೆ, ರಾಜಕೀಯದ ಬೆಳವಣಿಗೆ ಹಿನ್ನೆಲೆಯಲ್ಲಿ ಇಬ್ರಾಹಿಂ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದೇವೆ. ಎಲ್ಲರೂ ಚರ್ಚೆ ಮಾಡಿಯೇ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments