ಚುನಾವಣೆ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಪಕ್ಷದ ಹಿರಿಯ ನಾಯಕ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ಪಕ್ಷ ಮತ್ತು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ಧಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ತನ್ನ ನೆಲೆ ಕಳೆದುಕೊಳ್ಳುತ್ತಿದೆ ಹಾಗಾಗಿ ನಾನು ಕಾಂಗ್ರೆಸ್ ಸದಸ್ಯ ತ್ವಕ್ಕೆ ರಾಜೀನಾಮೆ ನೀಡ್ತಿದ್ದೇನೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ರಾಜೀನಾಮೆ ತಲುಪಿಸುತ್ತೇನೆ, ನನ್ನ ಎಂಎಲ್ಸಿ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ.
ಅಂಗೀಕಾರ ಮಾಡುವುದು, ಬಿಡುವುದು ಅವರಿಗೆ ಸೇರಿದ್ದು, ನನ್ನ ರಾಜೀನಾಮೆ ಪತ್ರವನ್ನ ಸಿದ್ದರಾಮಯ್ಯಗೆ ಕೊಡ್ತೇನೆ. ಇಂದೇ ರಾಜೀನಾಮೆ ನೀಡುವುದಾಗಿ ತಿಳಿಸಿದ್ಧಾರೆ. ಇದು ಬಸವಾದಿ ನಾಡು, ರಾಜ್ಯವನ್ನ ಉತ್ತರ ಪ್ರದೇಶ ಆಗಲು ಬಿಡುವುದಿಲ್ಲ, ನಾವು ಬಸವ ತತ್ವದವರು, ಕೇಶವ ಕೃಪಾ ತತ್ವದವರಲ್ಲ. ಕನ್ನಡ ನಾಡಿನ ಕೀರ್ತಿ ಎತ್ತಿ ಹಿಡಿಯಬೇಕು ಅನ್ನೋದು ನನ್ನ ಕಲ್ಪನೆ. ರಾಹುಲ್, ಸೋನಿಯಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ನನ್ನ ಧನ್ಯವಾದಗಳು ಎಂದು ತಿಳಿಸಿದ್ಧಾರೆ.