Publish Date: Wed, 05 Jul 2023 (12:38 IST)
Updated Date: Wed, 05 Jul 2023 (12:42 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವರ್ಗಾವಣೆ ಆರೋಪಕ್ಕೆ ಕಾಂಗ್ರೆಸ್ ಸರ್ಕಾರ ತಬ್ಬಿಬ್ಬಾಗಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರಿಗೆ ಖಡಕ್ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಹೆಚ್ಡಿಕೆ ಆರೋಪದ ಬೆನ್ನಲ್ಲೆ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು `ಬಿ ಕೇರ್ ಫುಲ್ ಎಂದಿದ್ದಾರೆ. ವರ್ಗಾವಣೆ ವಿಷಯದಲ್ಲಿ ಎಚ್ಚರಿಕೆಯಿಂದ ಇರುವಂತೆ ತನ್ನ ಆಸಪ್ತರಿಗೆ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.
ಸರ್ಕಾರದ ವಿರುದ್ಧ ಸುಮ್ಮನೆ ಆರೋಪ ಮಾಡಿದ್ರೆ ಯಾರೂ ಸಹಿಸಿಕೊಳ್ಳಬಾರದು. ಸರ್ಕಾರದ ಇಮೇಜ್ಗೆ ಧಕ್ಕೆ ತರಲು ಕುಮಾರಸ್ವಾಮಿ ಯತ್ನ ಮಾಡ್ತಿದ್ದಾರೆ. ಎಲ್ಲರೂ ಒಗ್ಗಟ್ಟಿನಿಂದ ಎದುರಿಸಬೇಕು. ಪ್ರತಿ ಇಲಾಖೆಯಲ್ಲಿ ವರ್ಗಾವಣೆ ಮಾಡುವಾಗ ಎಚ್ಚರಿಕೆಯಿಂದ ಮಾಡಬೇಕು ಎಂದಿದ್ದಾರೆ.