ಬೆಂಗಳೂರು : ನಗರ ಅಭಿವೃದ್ಧಿ ಸಂಬಂಧ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು (ಜ.2) ಸಭೆ ನಡೆಯಿತು. ಸಭೆಯಲ್ಲಿ ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ಸಿಎಂ ಸೂಚನೆ ನೀಡಿದ್ದಾರೆ.
ಮಾರ್ಚ್ ಒಳಗೆ ರಸ್ತೆ ಗುಂಡಿ ಮುಚ್ಚಬೇಕು. ತುಂಬಾ ಕಳಪೆಯಾಗಿವೆ ಎಂಬ ಆರೋಪಗಳು ಹೆಚ್ಚಾಗುತ್ತಿವೆ. 40 ಪರ್ಸೆಂಟ್ ಕಮಿಷನ್ ಎಂಬ ದೂರುಗಳು ಬರುತ್ತಿವೆ. ಇದೆಲ್ಲ ಆಗಬಾರದು ಆದಷ್ಟು ಬೇಗ ಗುಂಡಿಗಳನ್ನ ಮುಚ್ಚಿಸಿ ಅಂತ ಅಧಿಕಾರಿಗಳಿಗೆ ಬೊಮ್ಮಾಯಿ ಹೇಳಿದ್ದಾರೆ.
ಇನ್ನು ಸಭೆಯಲ್ಲಿ ಮಳೆ ಹಾನಿಯ ಅನಾಹುತಗಳ ಬಗ್ಗೆ ಪ್ರಸ್ತಾಪ ಮಾಡಲಾಯಿತು. ಈ ವೇಳೆ ರಾಜಕಾಲುವೆ ಒತ್ತುವರಿದಾರರಿಗೆ ಬಿಸಿ ಮುಟ್ಟಿಸಲು ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ನಗರದಲ್ಲಿ ಒತ್ತುವರಿದಾರರ ಹಾವಳಿ ಹೆಚ್ಚಾಗಿದೆ.
ಇದರ ಬಗ್ಗೆ ಹೆಚ್ಚು ಗಮನಹರಿಸಬೇಕು. ಮಳೆ ಬಂದ್ರೆ ಸಾಕಷ್ಟು ಸಮಸ್ಯೆಗಳಾಗುತ್ತವೆ. ನೀರು ಸರಾಗವಾಗಿ ಹರಿಯಲು ಒತ್ತುವರಿ ತೆರವು ಮಾಡಿ. ರಾಜಕಾಲುವೆ ಒತ್ತುವರಿ ತೆರವು ಬಗ್ಗೆ ಗಮನಹರಿಸಿ. ರಾಜಕಾಲುವೆಗಳಲ್ಲಿ ಹೂಳೆತ್ತುವ ಕಾರ್ಯ ನಡೆಯಬೇಕು. ರಸ್ತೆ ಗುಂಡಿ ಮುಚ್ಚುವ ಕಾರ್ಯ ಬೇಗ ಆಗಬೇಕು ಅಂತ ಅಧಿಕಾರಿಗಳಿಗೆ ತಿಳಿಸಿದರು.