Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ವ್ಯಾಪಕ ಮಳೆಯಾಗುತ್ತಿದೆ ಈ ಬಗ್ಗೆ ಅಗತ್ಯ ಕ್ರಮಗಳ ಕುರಿತು ನಾಳೆ ಸಿಎಂ ಬೊಮ್ಮಾಯಿ ಸಭೆ ನಡೆಸಲಾಗುವುದು ಎಂದ್ರು.. ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಳೆ ಅನಾಹುತ ಹಾಗೂ ಮಂಕಿಪಾಕ್ಸ್ ಆತಂಕದ ಕುರಿತು ನಾಳೆ ಅಧಿಕಾರಿಗಳ ಜತೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದ್ರು,ಇನ್ನೂ ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮಳೆ ನಷ್ಟದ ಬಗ್ಗೆ ಚರ್ಚಿಸಿ ಪರಿಹಾರದ ಬಗ್ಗೆ ಸೂಚನೆ ನೀಡುತ್ತೇನೆ ಎಂದರು.