Publish Date: Mon, 23 Oct 2023 (19:49 IST)
Updated Date: Mon, 23 Oct 2023 (19:54 IST)
ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ.. 3 ದಿನಗಳ ಕಾಲ ಪ್ರವಾಸ ಕಾರ್ಯಕ್ರಮಗಳನ್ನು ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಇಂದು ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಕಾಲೇಜಿನ ಸುತ್ತಲೂ ಶಿಥಿಲಗೊಂಡಿರುವ ಕಟ್ಟಡಗಳನ್ನ ಪರಿಶೀಲಿಸಿದ್ದಾರೆ.. ಇನ್ನು ಸಂಜೆ 4 ಗಂಟೆಗೆ ನಡೆಯುವ ವೈಮಾನಿಕ ಪ್ರದರ್ಶನವನ್ನ ಸಿಎಂ ಸಿದ್ದರಾಮಯ್ಯ ವೀಕ್ಷಣೆ ಮಾಡಲಿದ್ದಾರೆ. ಇನ್ನು ಮಂಗಳವಾರ ಬೆಳಗ್ಗೆ 8.30ಕ್ಕೆ ಸುತ್ತೂರು ಶಾಖಾ ಮಠಕ್ಕೆ ತೆರಳಲಿದ್ದಾರೆ. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡಿಬೆಟ್ಟಕ್ಕೆ ತೆರಳಲಿದ್ದಾರೆ. ಅ.24 ಮಧ್ಯಾಹ್ನ 1.46ಕ್ಕೆ ನಂದಿ ಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ. ಸಂಜೆ 4.40ಕ್ಕೆ ವಿಜಯದಶಮಿ ಮೆರವಣಿಗೆ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ 7.30ಕ್ಕೆ ಪಂಜಿನ ಕವಾಯತು ವೀಕ್ಷಿಸಲಿದ್ದಾರೆ. ಅ.25ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಅ.25ರಂದು ಸಂಜೆ ಮೈಸೂರಿನಿಂದ ಬೆಂಗಳೂರಿಗೆ ವಾಪಸಾಗಲಿದ್ದಾರೆ.