11,136 ಪೌರಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಉಳಿದವರಿಗೆ 2 ಮತ್ತು 3ನೇ ಹಂತದಲ್ಲಿ ಬೆಂಗಳೂರು ಮತ್ತು ಬೆಂಗಳೂರಿನಾಚೆ ಇರುವ ನಗರ ಭಾಗದಲ್ಲಿನ ಪೌರಕಾರ್ಮಿಕರು, ಅವರಿಗೆ ಸರ್ಕಾರಿ ನೌಕರರನ್ನಾಗಿ ಮಾಡಲು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು. ಇಂದು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಭಗವಾನ್ ಬುದ್ಧ ಬಾಬಾ ಸಾಹೇಬ್ ಡಾ: ಬಿ.ಆರ್. ಅಂಬೇಡ್ಕರ್ ಲೆಕ್ ಪಾರ್ಕ್ ಉದ್ಯಾನವನ ನಾಮಕರಣ ಸಮಾರಂಭದ ಉದ್ಘಾಟನೆ ಹಾಗೂ ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದ ಅವರು, ಪೌರಕಾರ್ಮಿಕರ ಆಪತ್ತು ನಿಧಿಯನ್ನು 2 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸಮಿತಿ ರಚಿಸಿ ಅದರ ಶಿಫಾರಸ್ಸಿನನ್ವಯ ಕ್ರಮ ಕೈಗೊಳ್ಳಲಾಗಿದೆ. ದೀನದಲಿತರ ಕಲ್ಯಾಣವೇ ಸರ್ಕಾರ ಗುರಿಯಾಗಿಸಿಕೊಂಡಿದೆ. ಇದಕ್ಕಾಗಿ ಎಲ್ಲರೂ ಒಗ್ಗಟ್ಟಾಗಿರಬೇಕು ಎಂದರು.