ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದರೂ ಸಹ ಸಿಎಂ ಆಯ್ಕೆ ಫೈನಲ್ ಆಗಿಲ್ಲ.. ಕಾಂಗ್ರೆಸ್ ಸರ್ಕಾರ ರಚನೆಗೆ ಸಿಎಂ ಆಯ್ಕೆ ತೊಡಕಾಗಿ ಪರಿಣಮಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ KPCC ಅಧ್ಯಕ್ಷ D.K. ಶಿವಕುಮಾರ್ ನಡುವೆ ಸಿಎಂ ಗಾದಿಗಾಗಿ ತೀವ್ರ ಪೈಪೋಟಿ ಇದೆ. ಈ ಹಿನ್ನೆಲೆಯಲ್ಲಿ ಹೊಸ ಸಿಎಂ ಪದಗ್ರಹಣ ವಿಳಂಬವಾಗ್ತಿದೆ.. ನಿನ್ನೆ ಮಧ್ಯರಾತ್ರಿವರೆಗೂ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. AICC ವೀಕ್ಷಕರು ಶಾಸಕರ ಅಭಿಪ್ರಾಯವನ್ನ AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಗೆ ರವಾನಿಸಿದ್ದಾರೆ. ಇಂದು AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಶಾಸಕರ ಅಭಿಪ್ರಾಯವನ್ನು ತಿಳಿಸಲಿದ್ದಾರೆ. ಶಾಸಕರ ಅಭಿಪ್ರಾಯ ಪರಿಗಣಿಸಿ, ಕಾಂಗ್ರೆಸ್ ಹೈಕಮಾಂಡ್ ಇಂದು ಅಥವಾ ನಾಳೆ ಸಿಎಂ ಹೆಸರು ಘೋಷಣೆ ಮಾಡಲಿದ್ದಾರೆ. ಗುರುವಾರ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ ಇದೆ. ಸಿಎಂ ಜೊತೆ 12-15 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯೂ ದಟ್ಟವಾಗಿದೆ.