Webdunia - Bharat's app for daily news and videos

Install App

ದೆಹಲಿ ಅಂಗಳಕ್ಕೆ ಸಿಎಂ ಆಯ್ಕೆ ಚೆಂಡು

Webdunia
ಸೋಮವಾರ, 15 ಮೇ 2023 (16:46 IST)
ಕಾಂಗ್ರೆಸ್​​ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದರೂ ಸಹ ಸಿಎಂ ಆಯ್ಕೆ ಫೈನಲ್​ ಆಗಿಲ್ಲ.. ಕಾಂಗ್ರೆಸ್​​​​​​​ ಸರ್ಕಾರ ರಚನೆಗೆ ಸಿಎಂ ಆಯ್ಕೆ ತೊಡಕಾಗಿ ಪರಿಣಮಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ KPCC ಅಧ್ಯಕ್ಷ D.K. ಶಿವಕುಮಾರ್​​​​ ನಡುವೆ ಸಿಎಂ ಗಾದಿಗಾಗಿ ತೀವ್ರ ಪೈಪೋಟಿ ಇದೆ. ಈ ಹಿನ್ನೆಲೆಯಲ್ಲಿ ಹೊಸ ಸಿಎಂ ಪದಗ್ರಹಣ ವಿಳಂಬವಾಗ್ತಿದೆ.. ನಿನ್ನೆ ಮಧ್ಯರಾತ್ರಿವರೆಗೂ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. AICC ವೀಕ್ಷಕರು ಶಾಸಕರ ಅಭಿಪ್ರಾಯವನ್ನ AICC ಅಧ್ಯಕ್ಷ ಮಲ್ಲಿಕಾರ್ಜುನ್​​​​ ಖರ್ಗೆಗೆ ರವಾನಿಸಿದ್ದಾರೆ. ಇಂದು AICC ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಕಾಂಗ್ರೆಸ್​​ ನಾಯಕರಾದ ರಾಹುಲ್​ ಗಾಂಧಿ ಹಾಗೂ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಶಾಸಕರ ಅಭಿಪ್ರಾಯವನ್ನು ತಿಳಿಸಲಿದ್ದಾರೆ. ಶಾಸಕರ ಅಭಿಪ್ರಾಯ ಪರಿಗಣಿಸಿ, ಕಾಂಗ್ರೆಸ್​​ ಹೈಕಮಾಂಡ್​​​ ಇಂದು ಅಥವಾ ನಾಳೆ ಸಿಎಂ ಹೆಸರು ಘೋಷಣೆ ಮಾಡಲಿದ್ದಾರೆ. ಗುರುವಾರ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ ಇದೆ. ಸಿಎಂ ಜೊತೆ 12-15 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯೂ ದಟ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments