Select Your Language

Notifications

webdunia
webdunia
webdunia
webdunia

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಸಿಎಂ ಸಿದ್ದರಾಮಯ್ಯ

Sampriya

ಮೈಸೂರು , ಸೋಮವಾರ, 19 ಮೇ 2025 (17:32 IST)
Photo Credit X
ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2 ವರ್ಷಗಳನ್ನು ಪೂರೈಸಿದ ಹಿನ್ನಲೆ ಹಮ್ಮಿಕೊಂಡಿದ ಕಾಂಗ್ರೆಸ್ ಸಾಧನಾ ಸಮಾವೇಶದ ಬಗ್ಗೆ ವಿಧಾನಪರಿಷತ್ ಸದಸ್ಯ ಎಚ್‌ ವಿಶ್ವನಾಥ್‌ ಟೀಕೆ ಮಾಡಿದ್ದಾರೆ.

ಮೈಸೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿ ಹಾಕಲು ಸರ್ಕಾರದ ದುಡ್ಡಿನಲ್ಲಿ ಸಾಧನಾ ಸಮಾವೇಶ ಮಾಡುತ್ತಿದೆ. ಇದೀಗ ಯಾವ ಸಾಧನೆಗಾಗಿ ಈ ಸಮಾವೇಶವನ್ನು ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಸಾಧನಾ ಸಮಾವೇಶದಲ್ಲಿ ತಮ್ಮ ತವರು ಜಿಲ್ಲೆಯ ಅಭಿವೃದ್ಧಿಗೆ ಏನು ಅನುದಾನ ನೀಡಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಓಡಾಡಲು ಎಷ್ಟು ಖರ್ಚು ಮಾಡಿದ್ದೀರಿ? ಮುಡಾ ಹಗರಣದಲ್ಲಿ ನಿಮ್ಮ ಕುಟುಂಬದ ಪಾತ್ರವೇನು? ನಿಮ್ಮ ಕಟು ನುಡಿಗಳಿಂದ ಎಷ್ಟು ಸರ್ಕಾರಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದನ್ನೂ ಅದರಲ್ಲೂ ತಿಳಿಸಬೇಕೆಂದು ಒತ್ತಾಯಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್