ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ವೀರಶೈವ, ಲಿಂಗಾಯತ ಎಂದು 2 ಗುಂಪಾಗಿ ಒಡೆದಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಫೇಸ್ ವ್ಯಾಲ್ಯೂ ಕಳೆದುಕೊಂಡಿದ್ದಾರೆ. ಕುತಂತ್ರದ ರಾಜಕಾರಣಕ್ಕೆ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ. ಇದು ಕಾಂಗ್ರೆಸ್ ಸರ್ಕಾರದ ಅಂತ್ಯಕ್ಕೆ ಕಾರಣವಾಗುತ್ತದೆ. ಸಚಿವರಾದ ವಿನಯ್ ಕುಲಕರ್ಣಿ, ಮಲ್ಲಿಕಾರ್ಜುನ್ ಮಧ್ಯೆ ಭಿನ್ನಾಭಿಪ್ರಾಯವಿದೆ. ಸ್ವಾಮೀಜಿಗಳ ನಡುವೆಯೂ ಕೂಡ ಭಿನ್ನಾಭಿಪ್ರಾಯ ಹುಟ್ಟು ಹಾಕಿದ್ದಾರೆ ಎಂದು ಈಶ್ವರಪ್ಪ ಅವರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ