Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರಕ್ಕೆ ಕೌಂಟ್ ಡೌನ್ ಶುರು

Siddaramaiah

Krishnaveni K

ಬೆಂಗಳೂರು , ಸೋಮವಾರ, 9 ಸೆಪ್ಟಂಬರ್ 2024 (10:00 IST)
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆಗೆ ಬರಲಿದ್ದು, ಇದೇ ವಾರ ಸಿದ್ದರಾಮಯ್ಯ ಭವಿಷ್ಯ ನಿರ್ಧಾರವಾಗಲಿದೆ.

ಮುಡಾ ಹಗರಣ ವಿಚಾರದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ಸಿದ್ದರಾಮಯ್ಯ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮತ್ತೊಮ್ಮೆ ಕೈಗೆತ್ತಿಕೊಳ್ಳಲಿದೆ. ಈಗಾಗಲೇ ನಾಲ್ಕು ಬಾರಿ ಕೋರ್ಟ್ ನಲ್ಲಿ ಈ ವಿಚಾರಣೆ ನಡೆದಿದೆ.

ಒಂದು ವೇಳೆ ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸರಿ ಎಂದು ತೀರ್ಪು ಬಂದರೆ ಅದು ಅವರ ಸಿಎಂ ಪಟ್ಟಕ್ಕೆ ಕುತ್ತು ತರಬಹುದು. ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನಲ್ಲಿ ನಡೆಯಲಿರುವ ಈ ವಾರದ ವಾದ-ವಿವಾದ ಅತ್ಯಂತ ಮಹತ್ವದ್ದಾಗಿದೆ.

ಮುಡಾ ಹಗರಣ ವಿಚಾರಣೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಇದೀಗ ಸಿಎಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬಹುತೇಕ ಅಂತಿಮ ಹಂತ ತಲುಪಿದ್ದು, ಇಂದಿಗೆ ಮುಕ್ತಾಯವಾಗಲಿದೆ. ಇದಾದ ಬಳಿಕ ಹೈಕೋರ್ಟ್ ತೀರ್ಪನ್ನು ಇನ್ನೊಂದು ದಿನಕ್ಕೆ ಕಾಯ್ದಿರಿಸಬಹುದು.  ಸಿಎಂ ಪರ ಅಭಿಷೇಕ್ ಮನು ಸಿಂಘ್ವಿ ಮತ್ತು ರಾಜ್ಯಪಾಲರ ಪರ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಬಳಕೆದಾರರ ಗಮನಕ್ಕೆ: ಕೇಂದ್ರ ಸರ್ಕಾರ ತರಲಿರುವ ಹೊಸ ನಿಯಮ ತಿಳಿಯಿರಿ