Webdunia - Bharat's app for daily news and videos

Install App

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನ ಫಿಕ್ಸ್, ಮಾಹಿತಿ ಕೊಟ್ಟ ಸಿಎಂ ಸಿದ್ದರಾಮಯ್ಯ

Sampriya
ಮಂಗಳವಾರ, 25 ಜೂನ್ 2024 (15:02 IST)
ಬೆಂಗಳೂರು: ಡಿಸೆಂಬರ್ 20ರಿಂದ 22ರವರೆಗೆ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಇಂದು ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ಬಳಿಕ ಮಾಧ್ಯಮದವರಿಗೆ ಮಾಹಿತಿ ನೀಡಿದರು.

ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಮುಂದೂಡಲಾಗಿದ್ದ ಸಮ್ಮೇಳನವನ್ನು ಇದೀಗ  ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ಈ ಬಾರಿಯ ಸಮ್ಮೇಳನದಲ್ಲಿ ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಮಂಡ್ಯದಲ್ಲಿ 48ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

ಮುಂದಿನ ಸುದ್ದಿ
Show comments