ಅರ್ಕಾವತಿ ಲೇಔಟ್ ಡಿನೋಟಿಫಿಕೇಶನ್`ನಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸರ್ಕಾರ ರಚಿಸಿದ್ದ ನ್ಯಾ. ಕೆಂಪಣ್ಣ ನೇತೃತ್ವದ ಸಮಿತಿ ಸರ್ಕಾರದ ಮುಖ್ಯ ಕಾರ್ದರ್ಶಿಗೆ ವರದಿ ಸಲ್ಲಿಸಿದೆ. ಡಿನೋಟಿಫಿಕೇಶನ್ನಿನಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಡಿನೋಟಿಫಿಕಶನ್ನಿನಲ್ಲಿ ಮುಖ್ಯಮಂತ್ರಿಗಳ ಪಾತ್ರವಿಲ್ಲ. ಹೈಕೋರ್ಟ್ ನಿರ್ದೇಶನದ ಮೇರೆಗೆ ಸರ್ಕಾರ ರಚಿಸಿದ್ದ ವಿಶೇಷ ಅಧಿಕಾರವಿದ್ದ ಭೂಸ್ವಾಧೀನಾಧಿಕಾರಿಗಳೇ ಹೈಕೋರ್ಟ್`ನ 6 ಮಾರ್ಗಸೂಚಿಗಳ ಅನ್ವಯ ಸ್ಥಳ ಪರಿಶೀಲನೆ ನಡೆಸಿ ಡಿನೋಟಿಫೈ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಿರುವುದಾಗಿ ತಿಳಿದು ಬಂದಿದೆ.
ವರದಿಯಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಕ್ಲೀನ್ ಚಿಟ್ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ನ್ಯಾಯಾಂಗ ತನಿಖೆಗೆ ಒಪ್ಪಿಸಿದ ದಿನವೇ ಹೀಗೆ ಆಗುತ್ತದೆ ಎಂದು ನಾನು ಹೇಳಿದ್ದೆ. ಕೆಂಪಣ್ಣ ಸಮಿತಿಗೆ ಸಿಎಂ ಪಾತ್ರದ ಬಗ್ಗೆ ಸಾಕ್ಷ್ಯಗಳು ಬೇಕಿದ್ದರೆ ನನ್ನನ್ನ ಕೇಳಬೇಕಿತ್ತು ಎಂದು ವ್ಯಂಗ್ಯವಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ