Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಿದ್ದರಾಮಯ್ಯ ಸರ್ಕಾರ ಕಾಂಗ್ರೆಸ್‌ ಪಕ್ಷದ ಎಟಿಎಂ: ಯೋಗಿ ಆದಿತ್ಯನಾಥ್

ಸಿದ್ದರಾಮಯ್ಯ ಸರ್ಕಾರ ಕಾಂಗ್ರೆಸ್‌ ಪಕ್ಷದ ಎಟಿಎಂ: ಯೋಗಿ ಆದಿತ್ಯನಾಥ್
ಉತ್ತರ ಕನ್ನಡ , ಗುರುವಾರ, 3 ಮೇ 2018 (15:38 IST)
ಚುನಾವಣೆ ಹತ್ತಿರ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಸಾರ್ವಜನಿಕ ಸಭೆ ಪ್ರಚಾರ ಎಗ್ಗಿಲ್ಲದೆ ನಡೆಯುತ್ತವೆ‌ ಅದರಲ್ಲೂ ವಿಷೇಶವಾದ ವ್ಯಕ್ತಿ ಗಳು ಬಂದರೆ ಸಾಕು ಜನಸಾಗರವೇ ಹರಿದು ಬರುತ್ತದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಿದ್ಧಾಪುರ ಕ್ಷೇತ್ರಕ್ಕೆ ಯೋಗಿ ಅದಿತ್ಯನಾಥ್ ಭೇಟಿ ನೀಡಿ ಬೃಹತ್ ಸಾರ್ವಜನಿಕ ಸಭೆ ನಡೆಸಿದರು. ಇನ್ನು ಇದೆ ವೇಳೆ ಮಾತನಾಡಿದ ಅವರು. ಮೊದಲು ತಮ್ಮ ಬಾಷಣದಲ್ಲಿ ಶಿರಸಿಯ ಜನತೆಗೆ ಕನ್ನಡದಲ್ಲಿ ನಮಸ್ಕಾರ ಹೇಳಿದರು. 
ಸಿದ್ದರಾಮಯ್ಯ ಸರ್ಕಾರ ಕಾಂಗ್ರೆಸ್‌ ಪಕ್ಷದ ಎಟಿಎಂ ಆಗಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನ ನಾವು ಸೋಲಿಸಬೇಕು. ಕರ್ನಾಟಕದಲ್ಲಿ ಭ್ರಷ್ಟಾಚಾರ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವನ್ನ ಕಿತ್ತು ಹಾಕೋಣಾ ಸಿದ್ದರಾಮಯ್ಯ ಸರ್ಕಾರ ಭಯೋತ್ಪಾದಕರಿಗೆ ಬೆಂಬಲ ಕೊಡುತ್ತಿದೆ. ಉತ್ತರ ಪ್ರದೇಶ ಸರ್ಕಾರ ಜಿಹಾದಿಗಳನ್ನ ನಿಯಂತ್ರಣಕ್ಕೆ ತಂದಿದೆ. ಈಗಾಗಲೇ ಕರ್ನಾಟಕದಲ್ಲಿ ಸಾಕಷ್ಟು ಹಿಂದು ಕಾರ್ಯಕರ್ತರ ಹತ್ಯೆಯಾಗಿದೆ. ಆದರೆ ಇಲ್ಲಿನ ‌ಸರ್ಕಾರ  ಹಿಂದು ಕಾರ್ಯಕರ್ತರ ಹತ್ಯೆ ಮಾಡಿದವರ ಜೊತೆ ಹೊಂದಾಣಿಕೆ ಮಾಡಿಕೊಂಡು ಹೋಗಿದೆ. ಇದರ ಜೊತೆಗೆ
ಕರ್ನಾಟಕದಲ್ಲಿ ಸಾಕಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡರು. 
 
ಉತ್ತರ ಪ್ರದೇಶದಲ್ಲಿ 23 ಕೋಟಿ ಜನರಿದ್ದರು ರೈತರು ಯಾರೂ ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದರೆ ರೈತರ ಆತ್ಮಹತ್ಯೆ ನಿಲ್ಲುತ್ತದೆ. ಉತ್ತರ ಪ್ರದೇಶದಲ್ಲಿ 86 ಲಕ್ಷ ರೈತ ಸಾಲ ಮನ್ನಾ ಮಾಡಿದ್ದೇವೆ. ಆದರೆ ಕರ್ನಾಟಕದಲ್ಲಿ ಯಾಕೆ ಸಾಲ ಮನ್ನಾ ಮಾಡಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ವಿರುದ್ದ ಕಿಡಿಕಾರಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸೊಗಡು ಶಿವಣ್ಣ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ.