Webdunia - Bharat's app for daily news and videos

Install App

ಜಾತಿ ಗಣತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ

Krishnaveni K
ಶುಕ್ರವಾರ, 4 ಅಕ್ಟೋಬರ್ 2024 (16:46 IST)
ಕೊಪ್ಪಳ: ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು , ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
ಅವರು ಇಂದು ಗಿಣಿಗೇರ ಏರ್ ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
 
 ಜಾತಿ ಗಣತಿ ಜಾರಿ ಮಾಡುವ ಬಗ್ಗೆ ಶಾಸಕ ಬಸವರಾಜ ರಾಯರೆಡ್ಡಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಯರೆಡ್ಡಿಯವರು ತಮ್ಮ ಅಭಿಪ್ರಾಯವನ್ನು  ತಿಳಿಸಿದ್ದಾರೆ. ಮುಂದಿನ ವಾರ ಹಿಂದುಳಿದ ವರ್ಗಗಳ ಇಲಾಖಾ ಸಚಿವರ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದರು.
 
ಒಳಮೀಸಲಾತಿ ಜಾರಿ ಬಗ್ಗೆ ಪರಿಶೀಲನೆ
 
ಒಳಮೀಸಲಾತಿ ಜಾರಿ ತರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ , ಒಳಮೀಸಲಾತಿ ಜಾರಿಯ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಆದೇಶ ನೀಡಿದೆ. ಈ ಸಂಬಂಧ  ಸಚಿವ ಸಂಪುಟದಲ್ಲಿ ಹಾಗೂ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
 
ಬಿಜೆಪಿ ಜೆಡಿಎಸ್ ಪಕ್ಷ ದುರ್ಬಲವಾಗುವ ಭಯ ಕಾಡುತ್ತಿದೆ
 
ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡು, ಸಿದ್ದರಾಮಯ್ಯನವರ ಪರವಾಗಿ ಬ್ಯಾಟಿಂಗ್ ಮಾಡಿದ ಬಗ್ಗೆ  ಕುಮಾರಸ್ವಾಮಿಯವರು ಟೀಕೆ ಮಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಜಿ.ಟಿ.ದೇವೇಗೌಡರು ಅವರು ಜೆಡೆಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷರಾಗಿದ್ದು,ಹೇಳಿಕೆ ಸರಿಯಾಗಿಯೇ ಇರುತ್ತದೆ. ಭಾಜಪ ಮತ್ತು ಜೆಡಿಎಸ್ ನವರಿಗೆ ನಾನು ಅಧಿಕಾರದಲ್ಲಿದ್ದರೆ , ಅವರ ಪಕ್ಷಗಳು ದುರ್ಬಲವಾಗುವ ಭಯ ಅವರನ್ನು ಕಾಡುತ್ತಿದೆ ಎಂದರು.
 
ಊಹಾಪೋಹಗಳು ಬೇಡ
 
ಸಚಿವ ಸತೀಶ್ ಜಾರಕಿಹೊಳಿಯವರು ಪಕ್ಷದ ವರಿಷ್ಠರನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,  ಎಐಸಿಸಿ ಅಧ್ಯಕ್ಷರಾಗಿರುವ ಖರ್ಗೆಯವರನ್ನು ಪಕ್ಷದಲ್ಲಿ ಸಚಿವರಾಗಿರುವ ಸತೀಶ್ ಜಾರಕಿಹೊಳಿಯವರು ಭೇಟಿಯಾಗುವುದು ತಪ್ಪೇನಲ್ಲ. ಇಲ್ಲಸಲ್ಲದ ಊಹಾಪೋಹಗಳಿಗೆ ಅವಕಾಶ ನೀಡಬಾರದು ಎಂದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments