Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಿಎಂ ಸಿದ್ದು ಜನಸ್ಪಂದನ ಕಾರ್ಯಕ್ರಮ: ನೋಂದಣಿ ಮಾಡಿಸಿಕೊಳ್ಳುವುದು ಹೇಗೆ ತಿಳಿಯಿರಿ

Siddaramaiah

Krishnaveni K

ಬೆಂಗಳೂರು , ಗುರುವಾರ, 8 ಫೆಬ್ರವರಿ 2024 (09:27 IST)
Photo Courtesy: Twitter
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಜನಸ್ಪಂದನ ಕಾರ್ಯಕ್ರಮ ಇಂದು ವಿಧಾನಸೌಧದ ಮುಂಭಾಗ ನಡೆಯಲಿದೆ. ಇದಕ್ಕಾಗಿ ಸಾರ್ವಜನಿಕರು ತಮ್ಮ ಗುರುತಿನ ಚೀಟಿಯೊಂದಿಗೆ ಬಂದು ನೋಂದಣಿ ಮಾಡಬೇಕಾಗುತ್ತದೆ.

ಜನರ ಸಮಸ್ಯೆಗಳನ್ನು ಆಲಿಸಲು ಖುದ್ದು ಸಿಎಂ ಸಿದ್ದರಾಮಯ್ಯನವರೇ ಉಪಸ್ಥಿತರಿರಲಿದ್ದಾರೆ. ಅಲ್ಲದೆ, ಆದಷ್ಟು ಸ್ಥಳದಲ್ಲೇ ಪರಿಹಾರ ಒದಗಿಸಲು ಅಧಿಕಾರಿಗಳನ್ನೂ ಬರಲು ಸೂಚನೆ ನೀಡಿದ್ದಾರೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ರವರೆಗೆ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ 10 ಸಾವಿರಕ್ಕೂ ಅಧಿಕ ಆಸನ ವ್ಯವ‍ಸ್ಥೆ, ಎಲ್ ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದೆ.

ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯ
ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಾದರೆ ಸಾರ್ವಜನಿಕರು ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿಯಂತಹ ಗುರುತಿನ ಚೀಟಿಯೊಂದಿಗೆ ಬಂದು ನೋಂದಣಿ ಮಾಡಿಸಿಕೊಳ್ಳಬೇಕು. ರಿಜಿಸ್ಟರ್ ಮಾಡಿಸಿಕೊಳ್ಳುವಾಗ ಯಾವ ಇಲಾಖೆ ಸಮಸ್ಯೆ ಎಂದು ವಿಚಾರಿಸಿ ಆಯಾ ಇಲಾಖೆಯ ಕೌಂಟರ್ ನಂಬರ್ ಕೊಡಲಾಗುತ್ತದೆ. ಆ ಕೌಂಟರ್ ಬಳಿ ಸಾರ್ವಜನಿಕರು ತಮ್ಮ ಮನವಿ ಕೊಡಬಹುದು. ಕೌಂಟರ್ ಗಳಲ್ಲಿ ಮೊದಲು ಅಧಿಕಾರಿಗಳು ಅರ್ಜಿ ಸ್ವೀಕರಿಸುತ್ತಾರೆ. ಬಳಿಕ ಸಿಎಂ ಸಿದ್ದರಾಮಯ್ಯನವರೇ ಆ ಅರ್ಜಿಗಳನ್ನು ಪರಿಶೀಲಿಸಲಿದ್ದಾರೆ. ಆನ್ ಲೈನ್ ನಲ್ಲೂ ನೋಂದಣಿ ಮಾಡಿಸಿಕೊಳ್ಳಬಹುದಾಗಿದ್ದು, 1902 ಸಂಖ್ಯೆಗೆ ಕರೆ ಮಾಡಿ ರಿಜಿಸ್ಟರ್ ಮಾಡಬಹುದಾಗಿದೆ.

ಜನಸ್ಪಂದನ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗಾಗಿ ಉಪಹಾರ, ನೀರಿನ ವ್ಯವಸ್ಥೆ ಮಾಡಲಾಗಿದೆ. ಜನಸ್ಪಂದನಕ್ಕೆ ಬರುವ ಸಾರ್ವಜನಿಕರಿಗೆ ಮೆಜೆಸ್ಟಿಕ್ ನಿಂದ ಮತ್ತು ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕಕ್ಕೆ ಕೊಟ್ಟ ಹಣದ ಲೆಕ್ಕ ನೀಡಿದ ನಿರ್ಮಲಾ ಸೀತಾರಾಮನ್