ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಇಂದು ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆಗೈದು ದೇವಿಯ ಆಶೀರ್ವಾದ ಪಡೆದರು. ತಂದೆ ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರ ಬದಲಾಯಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಸುಳಿವು ನೀಡಿದ್ದಾರೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಪಕ್ಷವನ್ನು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕು ಎನ್ನುವುದು ನಮ್ಮ ಗುರಿಯಾಗಿದೆ. ಎಲ್ಲಾ ಕಾಂಗ್ರೆಸ್ ನಾಯಕರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.