Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಿಎಂ ಸಿದ್ದರಾಮಯ್ಯ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ: ಶೆಟ್ಟರ್

ಸಿಎಂ ಸಿದ್ದರಾಮಯ್ಯ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ: ಶೆಟ್ಟರ್
ಬೆಂಗಳೂರು , ಗುರುವಾರ, 23 ಮಾರ್ಚ್ 2017 (15:57 IST)
ಕೇಂದ್ರ ಸರಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು  ನಯಾ ಪೈಸೆ ಕೂಡಾ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ  ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
 
ಹಕ್ಕುಚ್ಯುತಿ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡಿದೆ. ಆದರೆ, ಕೇಂದ್ರ ಸರಕಾರ ಅಂಗನವಾಡಿ ನೌಕರರಿಗಾಗಿ ಒಂದು ಪೈಸೆ ಕೂಡಾ ಬಿಡುಗಡೆ ಮಾಡಿಲ್ಲವೆಂದು ಸುಳ್ಳು ಹೇಳಿದ್ದಾರೆಂದು ಗುಡುಗಿದರು.
 
ಸಿಎಂ ತಮ್ಮ ಸ್ಥಾನಮಾನವನ್ನು ಮರೆತು ವರ್ತಿಸಿದ್ದಾರೆ. ಈ ಬಗ್ಗೆ ವಿವರಣೆ ಕೊಡಲು ನಮಗೆ ಅವಕಾಶ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಸಿಎಂ ಸಿದ್ದರಾಮಯ್ಯ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದರಿಂದ ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಅವಕಾಶ ನೀಡಬೇಕು ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸ್ಪೀಕರ್‌ಗೆ ಮನವಿ ಮಾಡಿದ್ದರು.
 
ಸ್ಪೀಕರ್ ಕೆ.ಬಿ.ಕೋಳಿವಾಡ್ ಹಕ್ಕುಚ್ಯುತಿ ಮೇಲಿನ ಚರ್ಚೆಗೆ ಅವಕಾಶ ನೀಡಿದಾಗ ಅಡಳಿತ ಪಕ್ಷದ ಸದಸ್ಯರು ಸದನದಲ್ಲಿ ಕೋಲಾಹಲವೆಬ್ಬಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯವರು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ: ಕುಮಾರಸ್ವಾಮಿ