Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಕೊಲೆಗಡುಕ ಸಚಿವ ವಿನಯ್ ಕುಲ್ಕರ್ಣಿಗೆ ಸಿಎಂ ಸಿದ್ದರಾಮಯ್ಯ ರಕ್ಷಣೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಯೋಗೇಶ್ ಗೌಡ ಹತ್ಯೆ ಪ್ರಕರಣದ ಸಾಕ್ಷ್ಯಗಳನ್ನು ನಾಶಪಡಿಸುವಲ್ಲಿ ತೊಡಗಿದೆ. ಇಂತಹ ಕೊಲೆಗಡುಕ ಸಚಿವರಿಗೆ ಸಿಎಂ ಬೆಂಬಲಿಸುತ್ತಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದು ಗುಡುಗಿದ್ದಾರೆ.
ಜಿಪಂ ಸದಸ್ಯ ಯೋಗೇಶ್ ಗೌಡ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ, ರಾಜ್ಯ ಸರಕಾರ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೇ ಶಾಮೀಲಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯ ಸರಕಾರದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ರಾಜ್ಯ ಅಪರಾಧಿಗಳ ತಾಣವಾಗುತ್ತಿದೆ. ದೇಶದಲ್ಲಿಯೇ ಭ್ರಷ್ಟಾಚಾರ, ಅಪರಾಧಗಳಲ್ಲಿ ನಂಬರ್ ಒನ್ ಸ್ಥಾನ ಪಡೆದಿರುವುದು ಸಿಎಂ ಸಾಧನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.