Select Your Language

Notifications

webdunia
webdunia
webdunia
webdunia

ಬಿಜೆಪಿಯವರು ನೆಮ್ಮದಿ ಕೆಡಿಸುವುದರಲ್ಲಿ ನಿಸ್ಸೀಮರು: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ

Sampriya

ಬೆಂಗಳೂರು , ಸೋಮವಾರ, 8 ಸೆಪ್ಟಂಬರ್ 2025 (16:10 IST)
ಬೆಂಗಳೂರು: ಬಿಜೆಪಿಯವರು ಅನವಶ್ಯಕವಾಗಿ ಪ್ರಚೋದನೆ ಮಾಡುವುದರಲ್ಲಿ ನಿಸ್ಸೀಮರು ಎಂದು ಮದ್ದೂರು ಗಲಭೆ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. 

ಈ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಸಮಾಜದ ಸ್ವಾಸ್ಥ್ಯ, ನೆಮ್ಮದಿ ಕೆಡಿಸುವುದರಲ್ಲಿ ನಿಸ್ಸೀಮರು. ಈ ಪ್ರಕರಣ ಸಂಬಂಧ ಅನಗತ್ಯವಾಗಿ ಗುಂಪು ಸೇರಿ ಗಲಾಟೆ ಮಾಡಿಸುವವರು, ಮಾಡುವವರ ಮೇಲೆ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಮದ್ದೂರಿಗೆ ಹೋಗುತ್ತಿದ್ದಾರೆ. ಅಲ್ಲಿನ ಪರಿಸ್ಥಿತಿ ಅವಲೋಕನ ಮಾಡಿ ಅವರು ನೀಡುವ ವರದಿ ಮೇಲೆ ಮುಂದಿನ ಕ್ರಮ ಎಂದರು. 

ಮೆರವಣಿಗೆ ಸಂದರ್ಭದಲ್ಲಿ ಬಾವುಟ ತೆರವು ಮಾಡುವ ವೇಳೆ ಗಲಾಟೆ ನಡೆದಿದೆ ಎಂಬ ಮಾಹಿತಿಯಿದೆ. ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೆ ಹಿಂಸಾಚಾರ ನಡೆಯುತ್ತಿರಲಿಲ್ಲವಲ್ಲಾ ಎಂದು ಕೇಳಿದ್ದಕ್ಕೆ ಸಿಎಂ, ಅಲ್ಲಿ ಏನು ನಡೆದಿದೆ ಎಂದು ವರದಿ ಸಂಪೂರ್ಣ ಬಂದ ಮೇಲೆ ತೀರ್ಮಾನ ಮಾಡುತ್ತೇವೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ತಾಲಿಬಾನ್ ಸರ್ಕಾರವಿದೆ: ಪ್ರತಾಪ ಸಿಂಹ ಆಕ್ರೋಶ