Webdunia - Bharat's app for daily news and videos

Install App

ಧರ್ಮದ ಹೆಸರಿನಲ್ಲಿ ದೇಶ ಒಡೆಯುವ ಬಿಜೆಪಿಯವರನ್ನು ಹತ್ತಿರಕ್ಕೂ ಸೇರಿಸಬೇಡಿ: ಸಿಎಂ ಸಿದ್ದರಾಮಯ್ಯ

Krishnaveni K
ಸೋಮವಾರ, 14 ಅಕ್ಟೋಬರ್ 2024 (10:30 IST)
ಸವದತ್ತಿ : ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. 
 
ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ, ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.
 
ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. 
 
ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ ಮಾಡಿದ್ದಾರೆ. ಇವರಲ್ಲಿ ಲಕ್ಷಾಂತರ ಮಂದಿ ತಾಯಿ ರೇಣುಕಾ ಯಲ್ಲಮ್ಮನ ದರ್ಶನ ಕೂಡ ಪಡೆದಿದ್ದಾರೆ ಎಂದರು.
 
ದೇವರು-ಧರ್ಮ ತಮಗೆ ಮಾತ್ರ ಸೇರಿದ್ದು ಬಿಜೆಪಿಯವರು ಭಯಾನಕ ಮಾತಾಡ್ತಾರಲ್ಲಾ, ಆದರೆ ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂಥಾ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
 
ತಾಯಿ ಯಲ್ಲಮ್ಮ ಶಕ್ತಿ ದೇವತೆ. ಯಾವ  ದೇವರೂ ಕೂಡ ಮನುಷ್ಯರನ್ನು ಧರ್ಮದ ಕಾರಣಕ್ಕೆ ದ್ವೇಷಿಸಿ ಎಂದು ಹೇಳುವುದಿಲ್ಲ. ದೇವರ ಹೆಸರಲ್ಲಿ ದ್ವೇಷ ಹೇಳುವುದು ಬಿಜೆಪಿ ಮಾತ್ರ. ತಾಯಿ ರೇಣುಕಾ ಯಲ್ಲಮ್ಮ ದೇವರು, ಧರ್ಮದ ಹೆಸರಲ್ಲಿ ಮನುಷ್ಯರನ್ನು ದ್ವೇಷಿಸಿ ಎಂದು ಎಲ್ಲೂ ಹೇಳಿಲ್ಲ ಎಂದರು. 
 
ಗೃಹಲಕ್ಷ್ಮಿ ಯೋಜನೆ ಜಾರಿಯಾದರೆ ಅತ್ತೆ ಸೊಸೆ ಜಗಳ ಆಗ್ತದೆ ಎಂದು ಬಿಜೆಪಿಯವರು ಬೊಬ್ಬೆ ಹೊಡೆದರು. ಆದರೆ ಗೃಹಲಕ್ಷ್ಮಿ ಹಣವನ್ನು ಕೂಡಿಸಿಟ್ಟು ಅತ್ತೆಯರು ಸೊಸೆಯರಿಗೆ ಬಳೆ ಅಂಗಡಿ ಹಾಕಿಕೊಟ್ಟಿದ್ದಾರೆ, ಟೈಲರಿಂಗ್ ಮೆಷಿನ್ ಕೊಡಿಸಿದ್ದಾರೆ. ಇಂಥವು ನೂರಾರು ಉದಾಹರಣೆಗಳಿವೆ ಎಂದರು. 
 
ತಾಯಿ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ. ನಿಮ್ಮ ಸಹಕಾರ ಅಗತ್ಯ. ಕ್ಷೇತ್ರದಲ್ಲಿ ಅನಧಿಕೃತವಾಗಿ ಮಳಿಗೆಗಳನ್ನು ಹಾಕಬೇಡಿ. ಅನಧಿಕೃತವಾಗಿ ಇರುವವರಿಗೆ ಬೇರೆ ವ್ಯವಸ್ಥೆ ಮಾಡೋಣ. ಆದರೆ ಅಕ್ರಮವಾಗಿ ಯಾರೂ ಮಳಿಗೆ ಹಾಕದೆ ಸಹಕರಿಸಿ ಎಂದು ಕರೆ ನೀಡಿದರು.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments