Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬಾಬುಸಾಪಾಳ್ಯ ದುರಂತ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ವಿರುದ್ಧ ಗರಂ

Siddaramaiah

Krishnaveni K

ಬೆಂಗಳೂರು , ಗುರುವಾರ, 24 ಅಕ್ಟೋಬರ್ 2024 (16:09 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು  ಇಂದು ಬೆಂಗಳೂರಿನ ಬಾಬುಸಾ ಪಾಳ್ಯ ದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿ ಬಂದರು.

ಈ ವೇಳೆ ಅಧಿಕಾರಿಗಳ ವಿರುದ್ಧ ಅವರು ಕೆಂಡಾಮಂಡಲರಾದರು. ನಿಯಮಬಾಹಿರವಾಗಿ, ಸೂಕ್ತ ಅನುಮತಿ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ ಮುಂದಾಗುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ವಿಭಾಗೀಯ ಅಧಿಕಾರಿಗೂ ನೋಟಿಸ್ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಖಡಕ್ ಆಗಿ ಹೇಳಿದರು.

ಅನಧಿಕೃತ ನಿರ್ಮಾಣ ನಿಲ್ಲಿಸುವಂತೆ ನೋಟಿಸ್ ನೀಡಿದ್ದರೂ ನಿರ್ಮಾಣ ಮುಂದುವರೆಸಿದ ಮಾಲೀಕರು, ಗುತ್ತಿಗೆದಾರ, ಎಂಜಿನಿಯರ್ ಎಲ್ಲರ ವಿರುದ್ಧವೂ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಬಿಬಿಎಂಪಿ‌ ಆಯುಕ್ತ ತುಷಾರ ಗಿರಿನಾಥ್ ಅವರಿಗೆ ಸಿಎಂ ಸೂಚನೆ ನೀಡಿದರು. ಬಳಿಕ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದರು.

ಈ ವೇಳೆ ಅವರ ಜೊತೆಗೆ ಸಚಿವ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಶಾಸಕ ಬೈರತಿ ಬಸವರಾಜ್ ಹಾಗೂ ಬಿಬಿಎಂಪಿ ಆಯುಕ್ತರು ಮತ್ತು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಘಟನಾ ಸ್ಥಳ ಪರಿಶೀಲನೆ ಬಳಿಕ‌ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಗತ್ಯ ಇರುವ ಎಲ್ಲಾ ಆಧುನಿಕ ವ್ಯವಸ್ಥೆ ಬಳಿಕ ಕಾರ್ಮಿಕರಿಗೆ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಾಬುಸಾಬ್ ಪಾಳ್ಯ ಕಟ್ಟಡ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ